ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಪಲ್ಟಿಯಾದ KSRTC ಬಸ್ 20 ಕ್ಕೂ ಹೆಚ್ಚು ಜನರಿಗೆ ಗಾಯ
ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ವೊಂದು ಮಂಡ್ಯ ಸಮೀಪ ಪಲ್ಟಿಯಾಗಿ ಬಿದ್ದಿದೆ.
ಘಟನೆಯಲ್ಲಿ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನಿಂದ ಮಂಡ್ಯಗೆ ಬರುತ್ತಿದ್ದ ಬಸ್ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಬರುವಾಗ ಬೈಕ್ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಹೋದಾಗ ಕಂಟ್ಯನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸಾರ್ವಜನಿಕರು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು. ಗಾಯಾಳುಗಳನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.