ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ಅಕ್ಟೋಬರ್ 4 ಕ್ಕೆ ಮುಂದೂಡಿದೆ.
ಇದೇ ವೇಳೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮತ್ತೊಬ್ಬ ಆರೋಪಿ ರವಿಶಂಕರ್ ಜಾಮೀನು ಅರ್ಜಿ ವಿಚಾರಣೆಯೂ ಸಹ ಅಕ್ಟೋಬರ್ 4 ಕ್ಕೆ ಮುಂದೂಡಿಕೆಯಾಗಿದೆ.