ಬೆಂಗಳೂರು: ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಹತ್ಯೆ ವಿರೋಧಿಸುತ್ತಿರಲಿಲ್ಲ , ಗೋಮಾಂಸ ತಿನ್ನುತ್ತಿದ್ದರು ಎಂದಿದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಹಿಂದು ಮುಖಂಡ ತೇಜಸ್‌ಗೌಡರಿಂದ ದೂರು ನೀಡಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಹಿಂದೂ ಕಾರ್ಯಕರ್ತ, ತೇಜಸ್ ಗೌಡ
ಆರೋಗ್ಯ ಸಚಿವರ ವಿವಾದಾತ್ಮಕ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದು, ದಿನೇಶ್ ಗುಂಡೂರಾವ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕೋಮುದ್ವೇಷ ಪ್ರಚೋದನೆಗೆ ಒತ್ತಡ ತರುತ್ತಿರುವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಸಾರ್ವಜನಿಕರ ಕ್ಷಮೆ ಕೋರಬೇಕು. ಅವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.