ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಹಕಾರ ನಗರದ ರೈಲ್ವೆ ಅಂಡರ್ಪಾಸ್ ಬಳಿ ಹಿಟ್ ಆ್ಯಂಡ್ ರನ್ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಘಟನೆ ನಡೆದಿದ್ದು, ವಾಹನಕ್ಕೆ ಸಿಲುಕಿ ಅಪರಿಚಿತ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.
ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ: ತಾಯಿ, ಮಗ ಸಾವು: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿಯಾಗಿ ತಾಯಿ, ಮಗ ಮೃತಪಟ್ಟ ಘಟನೆ ನಡೆದಿದೆ.
ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48), ಪುತ್ರ ರಘು(26) ಬಲಿಯಾಗಿದ್ದಾರೆ.
ಶ್ರೀನಿವಾಸಪುರದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ತೆರಳುವಾಗ ದುರಂತ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.