ಉಪಯುಕ್ತ ಸುದ್ದಿ

335 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ!

Share It

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚಿ ನೀಡಿದೆ. ಯಾವುದೇ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್‌ www.karnemakaone.kar.nic ಗೆ ಭೇಟಿ ನೀಡಬೇಕು.

ಒಟ್ಟು ಹುದ್ದೆಗಳು:

ಅಂಗನವಾಡಿ ಕಾರ್ಯಕರ್ತೆ ಹುದ್ದೆ : 73
ಅಂಗನವಾಡಿ ಸಹಾಯಕಿ ಹುದ್ದೆ : 262

ವಿದ್ಯಾರ್ಹತೆ :

  1. ಅಂಗನವಾಡಿ ಕಾರ್ಯಕರ್ತೆಗೆ: ಪಿಯುಸಿ, ಡಿಪ್ಲೊಮ ಇಸಿಸಿಇ, ತತ್ಸಮಾನ ಶಿಕ್ಷಣ ಪಾಸ್ ಮಾಡಿದ್ದರೆ ಸಾಕು.
  2. ಸಹಾಯಕಿ ಹುದ್ದೆಗೆ: SSLC ಉತ್ತೀರ್ಣವಾಗಿದ್ದರೆ ಸಾಕು.

ವಯೋಮಿತಿ:

ಅರ್ಜಿಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷ. ಗರಿಷ್ಠ 35 ವರ್ಷ ಮೀರಿರಬಾರದು. ಹಿಂದುಳಿದ ವರ್ಗಗಳಿಗೆ 3 ವರ್ಷ ಹಾಗೂ SC, ST ಹಾಗೂ ಪ್ರವರ್ಗ 1 ಕ್ಕೆ 5 ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.

ಅಪ್ಲಿಕೇಶನ್ ಹಾಕುವಾಗ ಬೇಕಾದ ದಾಖಲೆಗಳು:

  1. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
  2. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
  3. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
  4. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ.
  5. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  6. ವಾಸಸ್ಥಳ ದೃಢೀಕರಣ ಪತ್ರ.
  7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
  8. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
  9. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
  10. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.

Share It

You cannot copy content of this page