ಅಪರಾಧ ರಾಜಕೀಯ ಸುದ್ದಿ

ಗ್ರಾ.ಪಂ. ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿದ ದುಷ್ಕರ್ಮಿಗಳು

Share It

ಕಲಬುರಗಿ: ಅಪರಿಚಿತ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ.

ಪಡಸಾವಳಗಿ ಗ್ರಾಮದ ವಿಶ್ವನಾಥ್​ ಜಮಾದಾರ್ ಕೊಲೆಯಾದವರು. ವಿಶ್ವನಾಥ್​​​ ಜಮಾದಾರ್ ಶುಕ್ರವಾರ ಬೆಳಗ್ಗೆ ಮಗನನ್ನು ಶಾಲೆಗೆ ಬಿಟ್ಟು ಜಿಡಗಾ ಕ್ರಾಸ್ ಬಳಿ ಬೈಕ್ ಬರುತ್ತಿದ್ದಾಗ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತರಯ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾರೆ.

ಗುಂಡಿನ ದಾಳಿಗೆ ವಿಶ್ವನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್​ ಅವರನ್ನು ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಸ್ಥಳಕ್ಕೆ ನೀಡಿ ಪರೀಶಿಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಆಳಂದ ಪೊಲೀಸರು ಹಂತಕರ ಪತ್ತೆಗೆ ಬಲೆ ಬಿಸಿದ್ದಾರೆ.


Share It

You cannot copy content of this page