ಬೆಂಗಳೂರು: ಜಾತಿ ನಿಂದನೆ ಮತ್ತು ಜೀವಬೆದರಿಕೆ ಪ್ರಕರಣದಲ್ಲಿ ಬಂಧನವಾಗಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುತ್ತಿಗೆದಾರನಿಗೆ ಜೀವಬೆದರಿಕೆ ಹಾಕುವ ಜತೆಗೆ ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿರುವ ಮುನಿರತ್ನಗೆ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇಸಿಜಿ, ರಕ್ತ ಪರೀಕ್ಷೆ, ರಕ್ತದೊತ್ತಡ, ಷುಗರ್ ಟೆಸ್ಟ್ ಸೇರಿದಂತೆ ಅನೇಕ ಪರೀಕ್ಷೆಗಳನ್ನು ವೈದ್ಯರು ನಡೆಸಿದ್ದಾರೆ. ಸುಮಾರು ಒಂದು ಗಂಟೆಯಿಂದ ಚಿಕಿತ್ಸೆ ನಡೆಸುತ್ತಿದ್ದು, ಚಿಕಿತ್ಸೆ ನಂತರ ಮರಳಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

