ಬೆಂಗಳೂರು: ಗಣೇಶ ಹಬ್ಬಕ್ಕೆ ಈಗಾಗಲೇ ಸಿದ್ಧತೆ ನಡೆಸಿದ್ದು, ವಿದ್ಯುತ್ ಅವಘಢ ಸಂಭವಿಸದಂತೆ ಬೆಸ್ಕಾಂ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ವಿದ್ಯುತ್ ಅವಘಡ ನಡೆದರೆ ಕೊಡಲೇ 1913 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ.
ಮಾರ್ಗಸೂಚಿಗಳು:
- ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು.
- ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು. ವಿದ್ಯುತ್ ಕಂಬ ದಿಂದ ಸಂಪರ್ಕ ಪಡೆಯಬಾರದು.
- ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರದು.
- ಮೆರವಣಿಗೆ ಮಾಡುವಾಗ ರಸ್ತೆ ಬದಿ ವಿದ್ಯುತ್ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬಾರದು.
- ಮೆರವಣಿಗೆ ಮಾರ್ಗವನ್ನ ಮುಂಚಿತ ಎಸಿ ಗಮನಕ್ಕೆ ತರಬೇಕು ಎಂದು ಸೂಚಿಸಿದೆ.