ಆರೋಗ್ಯ ಸುದ್ದಿ

ವಿಷವಾಯ್ತು ಅಹಾರ : ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

Share It

ಬೆಳಗಾವಿ : ಮಾರ್ಕಂಡೇಯ ನಗರದ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರು ತೀವ್ರ ನಿತ್ರಾಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಸಾಧ್ಯತೆ ಇದೆ ಎಂದು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಹೇಳಿದ್ದಾರೆ.

ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲ ನಿಮಿಷಗಳಲ್ಲಿ ಅಸ್ವಸ್ಥರಾದರು. ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಶಿಕ್ಷಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು. ಸಾಮೂಹಿಕವಾಗಿ ಎಲ್ಲರಿಗೂ ಹೊಟ್ಟೆನೋವು ಕಾಣಿಸಿಕೊಳ್ಳಲು ಆರಂಭಿಸಿದ್ದರಿಂದ ಆಂಬುಲೆನ್ಸ್‌ಗಳನ್ನು ಕರೆಸಲಾಯಿತು.

ಡಿಡಿಪಿಐ ಲೀಲಾವತಿ ಹಿರೇಮಠ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರ ಗಡಾದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಲೀಲಾವತಿ ಹಿರೇಮಠ ಮಾತನಾಡಿ,
24 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಿ, ಇನ್ನೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಾಯ ಇಲ್ಲ ಹೇಳಿದರು.

ಮಹಿಳಾ ಸ್ವಸಹಾಯ ಸಂಘದವರು ಅಡುಗೆ ಮಾಡಿದ್ದಾರೆ. ಘಟನೆ ಕುರಿತು ಬುಧವಾರ ಸಮಗ್ರವಾಗಿ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುತ್ತೇವೆ’ ಎಂದು ಪಿಎಂ- ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಬೆಳಗಾವಿ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಹೇಳಿದರು.


Share It

You cannot copy content of this page