ಕ್ರೀಡೆ ರಾಜಕೀಯ ಸುದ್ದಿ

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

Share It

ಬೆಳಗಾವಿ: ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

“ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ 36 ರನ್ ಗಳ ಅಂತರದಲ್ಲಿ ವಿದರ್ಭ ತಂಡವನ್ನು ಮಣಿಸಿರುವುದು ಸಂತೋಷದ ಸಂಗತಿ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನದೊಂದಿಗೆ ಕರ್ನಾಟಕ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

“ಟೂರ್ನಿಯಲ್ಲಿ ಆಕರ್ಷಕ ಪ್ರದರ್ಶನ ನೀಡಿರುವ ನಾಯಕ ಮಯಾಂಕ್ ಅಗರ್ವಾಲ್ ಸೇರಿದಂತೆ ತಂಡದ ಪ್ರತಿಯೊಬ್ಬ ಆಟಗಾರರು ಹಾಗೂ ತರಬೇತು ತಂಡದವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.


Share It

You cannot copy content of this page