ಅಪರಾಧ ಸುದ್ದಿ

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಸಬ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು!

Share It

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್​ ಬೈಕ್​ಗಳಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿದ್ದು. ಪರಿಣಾಮ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿವೆ.

ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ಘಟನೆ ಅಪಘಾತ ಸಂಭವಿಸಿದ್ದು. ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಎರಡು ಬೈಕ್​ಗಳಿಗೆ ಗುದ್ದಿ ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್‌ಪೆಕ್ಟರ್ ನಾಗರಾಜು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page