ಬೆಂಗಳೂರು: ಬಿಟಿಎಂ ಲೇಔಟ್ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.
ಕೋರಮಂಗಲದ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 615 ಕ್ಕೂ ಹೆಚ್ವು ಜನ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡಿದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಎಲ್ಲರೂ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಅದನ್ನು ಸದುಪಯೋಗ ಮಾಡಿಕೊಂಡು ಎಲ್ಲರೂ ಗುರುತಿನ ಚೀಟಿ ಪಡೆಯಿರಿ ಎಂದು ಅವರು ಸಲಹೆ ನೀಡಿದರು.
ಬೀದಿಬದಿಯಲ್ಲಿ ವ್ಯಾಪಾರ ಮಾಡುವವರನ್ನು ಗುರುತಿಸುವ ಸಲುವಾಗಿ GBA ಇಂತಹದ್ದೊಂದು ಯೋಜನೆ ಜಾರಿ ಮಾಡಿದೆ. ಅರ್ಜಿ ಸಲ್ಲಿಸಿದ ವ್ಯಾಪಾರಿಗಳಿಗೆ ಅಧಿಕಾರಿಗಳು ಸ್ವತಃ ಪರಿಶೀಲನೆ ನಡೆಸಿ ಕಾರ್ಡ್ ತಯಾರಿಸಿದ್ದಾರೆ. ಇದೀಗ ಆ ಕಾರ್ಡ್ ಗಳನ್ನು ಬಳಸಿಕೊಂಡು ವ್ಯಾಪಾರ ಮಾಡಲು ಅನುಕೂಲವಾಗಿದ್ದು, ಇದರಿಂದ ವ್ಯಾಪಾರ ಸ್ಥಳದಲ್ಲಾಗುವ ಸಣ್ಣಪುಟ್ಟ ಸಮಸ್ಯೆಗಳನ್ನು ತಡೆಯಲು ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಮಾಜಿ ಸದಸ್ಯರಾದ ಕೋರಮಂಗಲ ಚಂದ್ರಪ್ಪ, ಜಿ. ಮಂಜುನಾಥ್, ಬಿ.ಮೋಹನ್, ಮುರುಗೇಶ್ ಮೊದಲಿಯಾರ್, GNR ಬಾಬು, ಮಂಜುಳಾ ಸಂಪತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋವರ್ದನ್ ರೆಡ್ಡಿ, ಆನಂದ್, ನಂದ, ಗಣೇಶ್, ಕುಮಾರ್ ಗೌಡ, ಮಹದೇವ್, ಸಂಪಂಗಿ ರಾಜು ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.

