ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಯಲ್ಲಿ ಸ್ಪರ್ದೆಗೆ ರೆಡಿಯಾಗುತ್ತಿರುವ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ಆಗಮಿಸಿದ ಸಿ.ಪಿ. ಯೋಗೇಶ್ವರ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದರು.
ಮೈತ್ರಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷೃತರವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕಾಂಗ್ರೆಸ್ ಅವರಿಗೆ ಗಾಳ ಹಾಕಿದೆ ಎಂಬ ಮಾತುಗಳು ಇವೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ಮೂಲಕ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.