ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಆನಾರೋಗ್ಯದಿಂದ ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.
ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮನೋಹರ್ ತಹಶೀಲ್ದಾರ ಅವರಿಗೆ ನಾಲ್ಕು ಜನ ಪುತ್ರರು ಇಬ್ಬರು ಪುತ್ರಿಯರು ಇದ್ದಾರೆ.
ಮೃತರು 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
ಹಾನಗಲ್ NCJC ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಅವರ ಹುಟ್ಟುರಾದ ಅಕ್ಕಿವಳ್ಳಿ ಗ್ರಾಮದಲ್ಲಿನ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.