ರಾಜಕೀಯ ಸುದ್ದಿ

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್​ಐಆರ್ ದಾಖಲು

Share It

ಬೆಂಗಳೂರು: ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ.

ಬಸವನಗೌಡ ಪಾಟೀಲ್‌ ಯತ್ನಾಳ್‌ ಪ್ರಚಾರಕ್ಕೋಸ್ಕರ ಕಾಂಗ್ರೆಸ್‌‍ ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡುತ್ತಾರೆ. ರಾಹುಲ್‌ ಗಾಂಧಿ ಬಗ್ಗೆ ವಯಕ್ತಿಕವಾಗಿ ಟೀಕೆ ಮಾಡುತ್ತಿದ್ದು, ಯತ್ನಾಲ್ ವಿರುದ್ಧ ಹಲವು ಬಾರಿ ದೂರು ನೀಡಿದರು ಕ್ರಮ‌ ಕೈಗೊಳ್ಳುತ್ತಿಲ್ಲಾ.

ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್‌‍ ಪಕ್ಷದ ಕಾರ್ಯಕರ್ತರಿಗೆ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ಒತ್ತಾಯಿಸಿದ್ದಾರೆ.


Share It

You cannot copy content of this page