ಅಪರಾಧ ಸಿನಿಮಾ ಸುದ್ದಿ

ದರ್ಶನ್ ಜಾಮೀನು ಅರ್ಜಿ‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

Share It

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ‌ ನಟ ದರ್ಶನ್ ತೂಗುದೀಪ್ ಅವರು‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಸಿಎಚ್ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ಸದ್ಯ ಬಳ್ಳಾರಿ ಸೆಂಟ್ರಲ್ ಜೈಲಿನ ಸೆಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ತೂಗುದೀಪ್ ಅವರು ಇಂದು 102 ದಿನಗಳ ನಂತರ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ ನಗರದ 57ನೇ ಸಿಸಿಎಚ್ ನ್ಯಾಯಾಲಯ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.


Share It

You cannot copy content of this page