ಉಪಯುಕ್ತ ಸುದ್ದಿ

ದಸರಾ ಆನೆಯ ಜತೆ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡದಂತೆ ಆದೇಶ

Share It

ಬೆಂಗಳೂರು: ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವ್ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ದಸರಾ ಆನೆಗಳ ನಡುವಿನ ಕದಾಟದ ನಂತರ ಸಚಿವ ಈಶ್ವರ್ ಖಂಡ್ರೆ ಅವರು, ಯಾವುದೇ ಕಾರಣಕ್ಕೂ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವಿಡಿಯೋ ಮಾಡುವುದು, ಸೆಲ್ಫೀ ಕ್ಲಿಕ್ಕಿಸುವುದು ಹಾಗೂ ರೀಲ್ಸ್‌ಗೆ ಮುಂದಾಗುವಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಸೂಚಿಸಿದ್ದಾರೆ.

ಕೆಲವರು ಅನೆಯ ಜೊತೆ ಪೋಟೋ ತೆಗೆದುಕೊಂಡು ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ.

ಪ್ರಸ್ತುತ ಅರಮನೆಯಲ್ಲಿ 16 ಆನೆಗಳಿದ್ದು, 14 ಆನೆಗಳು ಅರಣ್ಯ ಇಲಾಖೆಗೆ ಸೇರಿದ್ದಾಗಿವೆ. ಅವುಗಳಲ್ಲಿ ನಾಲ್ಕು ಹೆಣ್ಣಾನೆಗಳಿವೆ. ಅರಣ್ಯ ಇಲಾಖೆ ಶಿಬಿರದ 14 ಆನೆಗಳೊಂದಿಗೆ ಅರಮನೆಯ ಎರಡು ಹೆಣ್ಣಾನೆಗಳಿವೆ. ಆನೆಗಳ ಕಾದಾಟ ಘಟನೆ ಬಳಿಕ ಅರಣ್ಯ ಇಲಾಖೆಯು 10 ಸಿಸಿಟಿವಿ ಕ್ಯಾಮೆರಾಗಳ ಜೊತೆಗೆ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಿದೆ.


Share It

You cannot copy content of this page