ರಾಜಕೀಯ ಸುದ್ದಿ

ಮೂಡಾ ಕೇಸ್; ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು

Share It

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ 2 ಆರೋಪಿಯಾಗಿದ್ದಾರೆ. ಇನ್ನು ಬಾಮೈದಾ ಮಲ್ಲಿಕಾರ್ಜುನ 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.


Share It

You cannot copy content of this page