ಉತ್ತರ ಕನ್ನಡ : ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿಯೊಬ್ಬ ಮುರುಡೇಶ್ವರ ಕಡಲ ತೀರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಮತ್ತೊಬ್ಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದ್ದು, ಮೃತ ವಿದ್ಯಾರ್ಥಿ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿ ಯನ್ನು ಬೆಂಗಳೂರಿನ ಧನುಶ್ .ಡಿ.ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು.
ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ.
ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ್ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ. ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.