ಬೆಂಗಳೂರು: ಚೆನ್ನೈನಿಂದ ಮೈಸೂರಿಗೆ ಬರುತ್ತಿದ್ದ ಮೈಸೂರು- ದರ್ಬಾಂಗ್ ಎಕ್ಸ್‌ಪ್ರೆಸ್ ರೈಲು ಮತ್ತು ಗೂಡ್ಸ್ ರೈಲಿನ ನಡುವೆ ಪರಸ್ಪರ ಡಿಕ್ಕಿಯಾಗಿದೆ.
ಚೆನ್ನೈ ನಗರದ ಹೊರವಲಯದಲ್ಲಿರುವ ತಿರುವಳ್ಳುವರ್ ಜಿಲ್ಲೆಯ ಕವರಪೆಟ್ಟ ಬಳಿ ಘಟನೆ ನಡೆದಿದೆ. ರೈಲು ನಿಲ್ದಾಣದಿಂದ ಒಂದು ಕಿ.ಮೀ.ದೂರದಲ್ಲಿ ಘಟನೆ ನಡೆದಿದೆ. ದರ್ಬಾಂಗ್ ನಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್‌ಪ್ರೆಸ್ ರೈಲು, ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ರೈಲಿನಲ್ಲಿ ನೂರಾರು ಕನ್ನಡಿಗರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಡಿಕ್ಕಿ ನಂತರ ಮೂರು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಎರಡು ಬೋಗಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಡಿಕ್ಕಿಯ ರಭಸಕ್ಕೆ ಐದಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿವೆ ಎಂದು ಹೇಳಲಾಗಿದೆ.
ಮೈಸೂರು ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಬರುತ್ತಿದ್ದ ಸಾವಿರಾರು ಪ್ರಯಾಣಿಕರು ರೈಲಿನಲ್ಲಿದ್ದರು. ಅನೇಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆಯುತ್ತಿದೆ.
ರೈಲ್ವೇ ಸಿಬ್ಬಂದಿ, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಘಟನೆಗೆ ಕಾರಣ ಏನೆಂಬುದನ್ನು ಕಂಡುಹಿಡಿಯುವ ಕಾರ್ಯ ಆರಂಭಿಸಿದ್ದಾರೆ.
updating…