ಕ್ರೀಡೆ ಸುದ್ದಿ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

Share It

ಮುಂಬೈ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡ ಪ್ರಕಟಿಸಿದೆ.

ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಭಾರತ 2-0 ಅಂತರದಿಂದ ಗೆದ್ದ ಅದೇ ತಂಡವನ್ನು ಬಿಸಿಸಿಐ ಆಯ್ಕೆ ಮುಂದುವರಿಸಿದೆ. ಕೇವಲ ಒಂದು ಬದಲಾವಣೆ ಮಾಡಿದ್ದರಿಂದ ತಂಡದಲ್ಲಿ ವಿಶೇಷವಾದ ಬದಲಾವಣೆಗಳು ಇಲ್ಲ.

ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ವೇಗಿ ಜಸ್‌ಪ್ರೀತ್ ಬುಮ್ರಾ ತಂಡ ಉಪನಾಯಕರಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯಲು ವಿಫಲವಾದ ಯುವ ವೇಗಿ ಯಶ್ ದಯಾಲ್ ಅವರನ್ನು ಕೈಬಿಡಲಾಗಿದೆ.

ಇನ್ನು ನ್ಯೂಜಿಲೆಂಡ್ ಸರಣಿಗೆ ಮೂವರು ವೇಗದ ಬೌಲರ್​ಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಆದರೆ ಅನುಭವಿ ಬೌಲರ್ ಮೊಹಮ್ಮದ್ ಶಮಿ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರಿಂದ ಅವರನ್ನು ಕೈಬಿಡಲಾಗಿದೆ.

ಅಕ್ಟೋಬರ್ 17 ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಮೊದಲ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಿವೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಜಸ್‌ಪ್ರಿತ್‌ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಆಕಾಶ್ ದೀಪ್.

ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ತಮ್ಮ ಸಹ ಆಟಗಾರ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಮರಳಿ ಪಡೆದಿದ್ದರು. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ 2 ಪಂದ್ಯಗಳಿಂದ 12.81ರ ಸರಾಸರಿಯಲ್ಲಿ 11 ವಿಕೆಟ್ ಪಡೆದ ವೇಗಿ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಹೀಗೆ ಬುಮ್ರಾ ಹಲವಾರು ವರ್ಷಗಳಿಂದ ಸುದೀರ್ಘ ಸ್ವರೂಪದಲ್ಲಿ ಅದ್ಭುತ ಪ್ರದರ್ಶನ ನೀಡಿದ ಕಾರಣ ಟೆಸ್ಟ್ ತಂಡದ ಉಪನಾಯಕರಾಗಿದ್ದಾರೆ.


Share It

You cannot copy content of this page