ಬೆಂಗಳೂರು: ಬಿಜೆಪಿ ನಾಯಕತ್ವಕ್ಕೆ ಸೆಡ್ಡುಹೊಡೆದಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತನ್ನ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ನ ಎರಡನೇ ಸಭೆಯನ್ನು ಬಾಗಲಕೋಟೆಯಲ್ಲಿ ನಡೆಸಲಿದ್ದಾರೆ.
ಸಭೆಯಲ್ಲಿ ವಿವಿಧ ಸಮಾಜದ ಸ್ವಾಮೀಜಿಗಳು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಅನೇಕರು ಭಾಗವಹಿಸಲಿದ್ದಾರೆ. ಮಾಜಿ ಸಚಿವರಾದ ವಿರೂಪಾಕ್ಷಪ್ಪ, ಗೂಳಿಹಟ್ಟಿ ಶೇಖರ್, ಹಾಲರವಿ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಲ್ತಪಡಿಸುತ್ತಲೇ, ಬಿಜೆಪಿಗೆ ಟಗ್ ಕೊಡುತ್ತಿರುವ ಕೆ.ಎಸ್. ಈಶ್ವರಪ್ಪ, ರಾಣಿ ಚೆನ್ನಮ್ಮ ಬ್ರಿಗೇಡ್ ಮೂಲಕ ಹಿಂದುಳಿದ ವರ್ಗಗಳ ಸಂಘಟನೆ ಮಾಡಲು ನಿರ್ಧರಿಸಿದ್ದಾರೆ. ಅದರ ಭಾಗವಾಗಿ ಸರಣಿ ಸಭೆಗಳು ನಡೆಯುತ್ತಿವೆ.