ಆನೇಕಲ್: ಮಗನೇ ತಂದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ.
ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಮಾಡಿದ ಆರೋಪಿ. ಇವರು ಮೂಲತಃ ಕೇರಳದ ಏರಿಮಲೆಯವರು. ಶನಿವಾರ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದೆ. ಆಗ ವಿನೋದ್ ಚಾಕು ತೆಗೆದುಕೊಂಡು ತಂದೆ ವೇಲಾಯುದನ್ ಅವರಿಗೆ ಇರಿದು ಕೊಲೆ ಮಾಡಿದ್ದಾನೆ.
ತೀವ್ರ ಗಾಯಗೊಂಡ ವೇಲಾಯುದನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸರು ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಿ ಆರೋಪಿ ವಿನೋದ್ನನ್ನು ವಶಕ್ಕೆ ಪಡೆದಿದ್ದಾರೆ.