ಮುಂಬೈ: ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದರಿಂದ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಪ್ರಯಾಣಿಕರೆಲ್ಲರು ಸುರಕ್ಷಿತವಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಕಾರಣಗಳಿಗಾಗಿ ಏರ್ ಇಂಡಿಯಾ ವಿಮಾನವನ್ನು ದೆಹಲಿಗೆ ತಿರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 14 ರಂದು ಮುಂಬೈನಿಂದ JFK ಗೆ ಹಾರುವ AI119 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಆಗಸ್ಟ್‌ನಲ್ಲಿ ಮುಂಬೈನಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನದ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ನಲ್ಲಿ ವಿಮಾನದಲ್ಲಿ ಬಾಂಬ್ ಇದೆ ಎಂಬ ಸಂದೇಶ ಬರೆದಿರುವುದು ಪತ್ತೆಯಾಗಿತ್ತು.
ಅದರಲ್ಲಿ 135 ಪ್ರಯಾಣಿಕರಿದ್ದರು. ಇದಾದ ಬಳಿಕ ಪೈಲಟ್ ಎಟಿಸಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.
ಬೆದರಿಕೆ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಆದರೆ, ತನಿಖೆಯ ನಂತರ ಬೆದರಿಕೆ ಸುಳ್ಳು ಎಂಬುದು ಸಾಬೀತಾಗಿತ್ತು.