ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಇಂದು ನಗರದ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಇಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಈಗಾಗಲೇ ಈ ಪ್ರಕರಣದ ಕುರಿತು ಎಸ್ಐಟಿ ತನಿಖಾ ತಂಡ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಲು ಮುಂದಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದ ಬಂಧಿತ ಪವಿತ್ರಾ ಗೌಡ ಅವರನ್ನು ಎ2 ಆರೋಪಿಯನ್ನಾಗಿ ಬದಲಾಯಿಸಿ, ಎ2 ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ಎ1 ಆರೋಪಿಯನ್ನಾಗಿ ಬದಲಾಯಿಸಲು ಎಸ್ಐಟಿ ತನಿಖಾ ತಂಡ ಮುಂದಾಗಿದೆ.