ಅಪರಾಧ ರಾಜಕೀಯ ಸುದ್ದಿ

ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಭಾಗಿ: ಇಡಿ

Share It

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಅವರು ಹಗರಣದಲ್ಲಿ ಭಾಗಿಯಾಗಿರುವ ಕುರಿತು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಇಡಿ ತಿಳಿಸಿದ್ದಾರೆ. ಹಗರಣದ ಮಾಸ್ಟರ್ ಮೈಂಡ್ ಬಿ. ನಾಗೇಂದ್ರ ಎಂದು ಉಲ್ಲೇಖಿಸಲಾಗಿದೆ. ಬಿ. ನಾಗೇಂದ್ರ ಅವರು ಹಗರಣದ ಆರೋಪಿ, ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್​ನ ಎಂಡಿ ಸತ್ಯನಾರಾಯಣ ವರ್ಮಾ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಣದ ಬಳಕೆಯ ಬಗ್ಗೆ ಬರೆದಿದ್ದಾರೆ.

ಬಿ.ನಾಗೇಂದ್ರ ಅಣತಿಯಂತೆ 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದ್ದು, ಇಡಿ ಅಧಿಕಾರಿಗಳು ಬಿ ನಾಗೇಂದ್ರ ಸೇರಿ ಐವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.


Share It

You cannot copy content of this page