ಅಪರಾಧ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಹತ್ಯೆ ಮಾಡಿದ ಪುತ್ರಿ

Share It

ಬೆಂಗಳೂರು: ಅಕ್ರಮ ಸಂಬಂಧ ಕುರಿತು ಪ್ರಶ್ನೆ ಮಾಡಿದ್ದಕ್ಕೆ ತಾಯಿಯನ್ನೇ ಮಗಳು ಹತ್ಯೆ ಮಾಡಿರುವ ಘಟನೆ ಹೊಂಗಸಂದ್ರದಲ್ಲಿ ನಡೆದಿದೆ.

ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.

ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

11 ವರ್ಷಗಳ ಹಿಂದೆ ಪವಿತ್ರಾ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು.

ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.

ವರದಿ ನಂತರ ಪೊಲೀಸರು ಪವಿತ್ರಾಳನ್ನು ವಿಚಾರಣೆ ನಡಸಿದಾಗ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದೆ.


Share It

You cannot copy content of this page