ಅಪರಾಧ ಸುದ್ದಿ

ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ವೈಜ್ಞಾನಿಕ ಕಾಮಗಾರಿಗೆ ASI ಬಲಿ

Share It

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಐ ಸಾವನ್ನಪ್ಪಿದ್ದಾರೆ.

ಎಐಸ್ಐ ನಾಭಿರಾಜ್ ಮೃತಪಟ್ಟವರು. ಇವರು ತಲೆಯ ಮೇಲೆ ರಾಡ್ ಬಿದ್ದು ಕಳೆದು ಮೂರು ದಿನಗಳಿಂದ ಸಾವು ಬದುಕಿನ ಹೋರಾಟ ನಡೆಸುತ್ತಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯ ಮೇಲ್ಸೇತುವೆ ಕಾಮಗಾರಿ ಅವೈಕ್ಞಾನಿಕವಾಗಿ ನಡೆಯುತ್ತಿದ್ದು, ಬೈಕ್ ನಲ್ಲಿ ಬರುತ್ತಿದ್ದ ನಾಭಿರಾಜ್ ಮೇಲೆ ರಾಡ್ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದು, ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share It

You cannot copy content of this page