ವಿಜಯಪುರ: ಮುನಿರತ್ನ ನಮ್ಮ ಪಕ್ಷದವರೇ ಇರಬಹುದು. ಆದರೆ, ಅವರು ದಲಿತರ ಬಗ್ಗೆ ಅಷ್ಟೊಂದು ಲಘುವಾಗಿ ಮಾತನಾಡಬಾರದು ಎಂದು ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುನಿರತ್ನ ವಿರುದ್ಧ ದಲಿತರ ಬಗ್ಗೆ ಲಘುವಾಗಿ ಮಾತನಾಡಿರುವ ಆರೋಪ ಕೇಳಿಬಂದಿದೆ. ಪೊಲೀಸರು ಬಂಧನ ಮಾಡಿದ್ದಾರೆ. ಅವರು ನಮ್ಮ ಪಕ್ಷದವರು ಎಂದ ಮಾತ್ರಕ್ಕೆ ದಲಿತರ ಬಗ್ಗೆ ಲಘುವಾಗಿ ಮಾತನಾಡುವುದನ್ನು ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.
ಸರಕಾರ ಮುನಿರತ್ನ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನಿನ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಯಾರೂ ದಲಿತರ ಬಗ್ಗೆ ಲಘುವಾಗಿ ಮಾತನಾಡುವ ಕೆಲಸ ಮಾಡವಬಾರದು, ಅಂತಹ ಸ್ಥಿತಿಯನ್ನು ಸರಕಾರ ನಿರ್ಮಾಣ ಮಾಡಬೇಕು ಎಂದು ಅವರು ಆಗ್ರಹಿಸಿದರು.

