ಸುದ್ದಿ

13ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​: ಬೆಂಗಳೂರಲ್ಲಿ ಬೆಳಗ್ಗೆಯಿಂದಲೇ ಮಳೆ

Share It

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಉತ್ತಮ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ.

ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಉತ್ತಮ ಮಳೆಯಾಗಿದೆ.

ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೋಮವಾರ ಬೆಳಗಿನಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ.


Share It

You cannot copy content of this page