ಬೆಂಗಳೂರು: ಜಮೀನು ವ್ಯಾಜ್ಯದ ಸಂಬಂಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಪೊಲೀಸ್ ಇನ್ಸ್‌ಪೆಕ್ಟರ್, ಆತನ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಠಾಣೆಯ ಬಳಿ ಜಮಾಯಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ನಿರ್ಮಿತಿ ಕೇಂದ್ರದ ಅಧಿಕಾರಿಗಳು ಜಮೀನಿನಲ್ಲಿ ಇದ್ದ ಮರಗಳ ತೆರವಿಗೆ ಆಗಮಿಸಿದ್ದರು. ಈ ವೇಳೆ ರಾಮಸ್ವಾಮಿ ಜಮೀನು ನಮ್ಮದು ಎಂದು ತಗಾದೆ ತೆಗೆದಿದ್ದ. ಈ ಕಾರಣಕ್ಕೆ ಅಧಿಕಾರಿಗಳು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ವಿಚಾರಣೆ ವೇಳೆ ಇನ್ಸ್‌ಪೆಕ್ಟರ್ ಪಾಪಣ್ಣ, ರಾಮಸ್ವಾಮಿ ಮೇಲೆ ಹಲ್ಲೆ ಮಾಡಿದರು ಎಂದು ಆರೋಪಿಸಲಾಗಿದ್ದು, ಹಲ್ಲೆಯಿಂದಾಗಿ ರಾಮಸ್ವಾಮಿ ಸಾವನ್ನಪ್ಪಿದ್ದಾರೆ ಎನ್ಮಲಾಗಿದೆ. ಹೀಗಾಗಿ, ಆತನ ಕುಟುಂಬಸ್ಥರು ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟಿಸಿದ್ದಾರೆ.
ಇನ್ಸ್‌ಪೆಕ್ಟರ್ ಪಾಪಣ್ಣನನ್ನು ಸಸ್ಪೆಂಡ್ ಮಾಡಬೇಕು. ನನ್ನ ಗಂಡನ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿ ರಾಮಸ್ವಾಮೊ ಪತ್ನಿ ಠಾಣೆಯ ಮುಂದೆ ಮೊಕ್ಕಂ ಹೂಡಿದ್ದಾರೆ. ನೂರಾರು ಸಂಬಂಧಿಕರು ಅವರಿಗೆ ಸಾಥ್ ನೀಡಿದ್ದು, ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.