ಅಪರಾಧ ಸುದ್ದಿ

ತೀರ್ಥಹಳ್ಳಿ ತಹಶೀಲ್ದಾರ್ ಚಿಕ್ಕನಗೌಡರ್ ಶವವಾಗಿ ಪತ್ತೆ

Share It

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ಅವರ ಮೃತದೇಹ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಪತ್ತೆಯಾಗಿದೆ.

ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಇವರನ್ನು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ನ್ಯಾಯಾಲಯದ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವೈಭವ್ ಲಾಡ್ಜ್‌ನಲ್ಲಿ ಉಳಿದಿದ್ದರು. ಮಂಗಳವಾರ ಸಂಜೆಯಿಂದಲೂ ಯಾರ ಸಂಪರ್ಕಕ್ಕೂ ಅವರು ಸಿಕ್ಕಿರಲಿಲ್ಲ.

ನಂತರ ಮೊಬೈಲ್ ಲೊಕೇಶನ್ ಪರಿಶೀಲನೆ ನಡೆಸಿದಾಗ ಮೆಜೆಸ್ಟಿಕ್ ಸಮೀಪ ತೋರಿಸುತ್ತಿತ್ತು.‌ ಅದನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ವೈಭವ್ ಲಾಡ್ಜ್ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಠಡಿ ಬಾಗಿಲು ಹಾಕಿತ್ತು. ಪೊಲೀಸರು ಬಾಗಿಲು ತೆರೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ‌ತಿಳಿಸಿದರು.

ಚಿಕ್ಕನಗೌಡರ್ ಅವರು ಮೂಲತಃ ಗದಗ ಮೂಲದವರು ಹಲವು ದಿನಗಳಿಂದ ತೀರ್ಥಹಳ್ಳಿಯಲ್ಲಿ 2023ರ ಅಕ್ಟೋಬರ್ ನಿಂದ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.


Share It

You cannot copy content of this page