ಉಪಯುಕ್ತ ಸುದ್ದಿ

ಭೂಕುಸಿತದ ಭೀತಿ: ಚಿಕ್ಕಮಗಳೂರಿನ 5 ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ

Share It

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿವೆ ಎಂದು ಸೂಚನೆ‌ ನೀಡಿದ ಹಿನ್ನೆಲೆಯಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ‌ ನೀಡಿದ್ದಾರೆ.

2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ ಮತ್ತೆ ಭೂಮಿ ಕುಸಿಯುವ ಸೂಚನೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೇತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಸ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ ಭೂಕುಸಿತ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ಇತ್ತೀಚೆಗೆ ಜಿಲ್ಲಾಧಿಕಾರಿಗೆ ಸಲ್ಲಿಸಿದ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಿದೆ. ಮಳೆ‌ ಹೆಚ್ಚಾದ್ರೆ ಮತ್ತೆ ಈ 5 ಗ್ರಾಮಗಳಲ್ಲಿ ಭೂ ಕುಸಿತವಾಗುವ ಸಾಧ್ಯತೆ ಎಂದು ವರದಿಯಲ್ಲಿ ಹೇಳಲಾಗಿದೆ.

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿ ಆಧರಿಸಿ ಕ್ರಮ ಕೈಗೊಳ್ಳಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಗ್ರಾಮಸ್ಥರಿಗೆ ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಚರ್ಚೆ ನಡೆಸಲಾಗುತ್ತದೆ. ಸರ್ಕಾರದ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.


Share It

You cannot copy content of this page