ರಾಜಕೀಯ ಸುದ್ದಿ

ಎಚ್‌ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎಸ್ಐಟಿ

Share It

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಕರ್ನಾಟಕ ಲೋಕಾಯುಕ್ತದ ಎಸ್‌ಐಟಿ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದೆ.

2015ರ ಅಗಸ್ಟ್ 3ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದರು.

ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ಅ.25ಕ್ಕೆ ವಿಚಾರಣೆಯನ್ನು ಮುಂದೂಡಿತು. ಪ್ರಕರಣದ ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣದ ಸಂಬಂಧಿಸಿದ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್‌ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.


Share It

You cannot copy content of this page