ಅಪರಾಧ ಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರ ಸಾವು

Share It

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಫಿರೋಜಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆ ಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟಾಕಿ ಸಂಗ್ರಹಿಸಿದ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಇದರಿಂದಾಗಿ ಮನೆ ಸಮೀಪದ ಮೇಲ್ಛಾವಣಿ ಕುಸಿದಿದೆ. ಪೊಲೀಸರು ಅವಶೇಷಗಳಡಿ ಸಿಲುಕಿದ 10 ಜನರನ್ನು ಹೊರಗೆ ತೆಗೆದಿದ್ದು, ಆರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ತಂಡ ಸ್ಥಳದಲ್ಲಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಕುಮಾರ್ ಹೇಳಿದರು. ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಫಿರೋಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಮೇಶ್ ರಂಜನ್ ಹೇಳಿದ್ದಾರೆ.


Share It

You cannot copy content of this page