ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಜೋರಾಗಿದ್ದು, ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಹಲವು ಅವಾಂತರ ಸೃಷ್ಟಿಸಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅ.23ರಂದು ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗುತ್ತದೆ. ಇನ್ನು ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇರುವುದರಿಂದ ಹೈಅಲರ್ಟ್ ಘೋಷಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.