ಹಾಸನ: ಅ.24ರಿಂದ ಹಾಸನಾಂಬದೇಗುಲದ ಬಾಗಿಲನ್ನು ತೆರೆಯಲಾಗುತ್ತಿದ್ದು, ನ. 3ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಸ ನೀಡಲಾಗಿದೆ
ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಅ. 24ರಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ.
ಬರುವ ಭಕ್ತರ ಗಮನ ಸೆಳೆಯಲು ಹಾಟ್ ಏರ್ ಬಲೂನ್ ಸಂಚಾರ, ಪ್ಯಾರಾ ಗ್ಲೈಡಿಂಗ್, ರಾಜ್ಯಮಟ್ಟದ ಸಮೂಹ ನೃತ್ಯ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಾಸನಾಂಬ ಆ್ಯಪ್, ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಸೇರಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾದಿಕಾರಿ ಸಿ ಸತ್ಯಭಾಮ ತಿಳಿಸಿದ್ದಾರೆ.