ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ*
ಕೆಂಪೇಗೌಡ ಬಸ್ ನಿಲ್ದಾಣ ಆವರಣದಲ್ಲಿ 20 ಹೊಸ ವೋಲ್ವೋ ಮಲ್ಟಿ ಅಕ್ಸೆಲ್ ಬಸ್ ಗಳ ಸಂಚಾರಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಗುಣಮಟ್ಟದ ಆರಾಮದಾಯಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೊಸದಾಗಿ 20 ನೂತನ ವೋಲ್ವೋ ಮಲ್ಟಿ ಆಕ್ಸಲ್ ಬಿಎಸ್ VI-9600s ಮಾದರಿಯ ಸ್ಲೀಪರ್ ಬಸ್ ಗಳನ್ನು ಪ್ರಯಾಣಕ್ಕೆ ಸಜ್ಜುಗೊಳಿಸಿದೆ.
ಸಮಾರಂಭದಲ್ಲಿ 1406 ಅಭ್ಯರ್ಥಿಗಳು 50 ಅಂಕಗಳನ್ನು ಪಡೆದಿರುವ 82 ಅಭ್ಯರ್ಥಿಗಳು ಚಾಲಕ ಕಂ ನಿರ್ವಾಹಕರ ಹುದ್ದೆಗೆ ತಾತ್ಕಾಲಿಕವಾಗಿ 6 ಅಭ್ಯರ್ಥಿಗಳಿಗೆ ನಿಯೋಜನೆ ಆದೇಶ ಪತ್ರವನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್(ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ್, KSRTC ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಸಿಬ್ಬಂದಿ ಹಾಗೂ ಜಾಗೃತಿ ವಿಭಾಗದ ನಿರ್ದೇಶಕರಾದ ಡಾ.ಕೆ .ನಂದಿನಿದೇವಿ, ನಿಗಮದ ಆಡಳಿತ ವರ್ಗ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.