ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಡ್ಯದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳವಾರ ಆತ್ಮಹತ್ಯೆ ಮಾಡಿಕೊಂಡು ಮಂಡ್ಯದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರೇಮಾ ಎಂದು ಹೇಳಲಾಗಿದ್ದು, ಇವರು ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಆರು ಲಕ್ಷ ಸಾಲ ಪಡೆದಿದ್ದರು.
ಈಗಾಗಲೇ ಪ್ರೇಮಾ ಅವರು ಆರು ಲಕ್ಷ ಹಣವನ್ನು ಕಟ್ಟಿದ್ದು, ಕಟ್ಟಿರುವ ಹಣವನ್ನು ಬಡ್ಡಿಗೆ ವಜಾ ಮಾಡಿಕೊಂಡಿದ್ದಾರೆ. ಇನ್ನುಳಿದ ಆರು ಲಕ್ಷ ಹಣ ಕಟ್ಟಿ ಎಂದು ಹಿಂಸೆ ಕೊಡುತ್ತಿದ್ದರು ಎಂದು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಆಸ್ಪತ್ರೆ ಮುಂದೆ ಜಮಾಯಿಸಿದ್ದ ಕರಾವೇ ಮತ್ತು ಇನ್ನಿತರೆ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿ ರಾಜ್ಯದ ಜನರ ಹಿತ ಕಾಯುವಲ್ಲಿ ಕ್ರಮವಹಿಸಿ ಎಂದು ಒತ್ತಾಯಿಸಿದರು.