ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಎಚ್. ಎನ್. ಪಾವನಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಅದೇ ಕ್ಯಾಂಪಸ್ ನಲ್ಲಿರುವ ಮಹಿಳಾ ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದರು.
ಮೃತ ಪಾವನ ಮೈಸೂರು ಜಿಲ್ಲೆಯ ಎಚ್.ಡಿ.ಕೊಟೆ ತಾಲೂಕಿನ ಹೆಬ್ಬಲಗುಪ್ಪೆ ಹಳ್ಳಿ ಮೂಲದವರು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Updating..