ಆರೋಗ್ಯ ಸುದ್ದಿ

ಹಕ್ಕಿ ಜ್ವರ ಭೀತಿ: ರಾಜ್ಯದ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನಗಳ ಸಾಗಾಣಿಕೆಗೆ ನಿಷೇಧ!

Share It

ಬೆಂಗಳೂರು : ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ವ್ಯಾಪ್ತಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಕೋಳಿ ಫಾರ್ಮ್​​ನಲ್ಲಿ ನಿತ್ಯ ಸಾವಿರಾರು ಕೋಳಿಗಳು ಇರುತ್ತಿದ್ದವು. ಆದರೆ ಈಗ ಹಕ್ಕಿ ಜ್ವರದ ಅಟ್ಟಹಾಸಕ್ಕೆ ಇಡೀ ಕೋಳಿ ಫಾರ್ಮ್​ ಬಣಗುಡುತ್ತಿದೆ.

ಫೆಬ್ರವರಿ 21ರಿಂದ ಪೌಲ್ಟ್ರಿ ಫಾರ್ಮ್​ನಲ್ಲಿ ಕೋಳಿಗಳು ಹಂತಹಂತವಾಗಿ ಮೃತಪಡುತ್ತಿದ್ದವು. ಅನುಮಾನ ಬಂದ ಅಧಿಕಾರಿಗಳು ಸತ್ತ ಕೋಳಿಗಳನ್ನು ಪ್ರಯೋಗಾಲಕ್ಕೆ ಕಳುಹಿಸಿದ್ದರು. ಪ್ರಯೋಗಾಲಯ ವರದಿಯಲ್ಲಿ, ಹಕ್ಕಿ ಜ್ವರ ದೃಢಪಟ್ಟಿತ್ತು. ಇದೊಂದೇ ಫಾರ್ಮ್​ನಲ್ಲಿ ಈವರೆಗೆ 2,400 ಕೋಳಿಗಳು ಹಕ್ಕಿಜ್ವರಕ್ಕೆ ತುತ್ತಾಗಿವೆ. ಈ ಪೈಕಿ ಅಧಿಕಾರಿಗಳೇ 1,020 ಕೋಳಿಗಳ ವಧೆ ಮಾಡಿ ಹೂತು ಹಾಕಿದ್ದಾರೆ.

ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹಕ್ಕಿ ಜ್ವರ ಹಬ್ಬಿರುವ ಶಂಕೆ ಶುರುವಾಗಿದೆ. ಅಧಿಕಾರಿಗಳು ಗ್ರಾಮದ ಸುತ್ತ 1 ಕಿ.ಮೀ ಅಪಾಯಕಾರಿ ವಲಯ ಎಂದು ಗುರುತು ಮಾಡಿದ್ದಾರೆ. ಕೋಳಿ ಫಾರ್ಮ್ ಸುತ್ತ ಸ್ಪ್ರೇ, ಪೌಡರ್ ಸಿಂಪಡಣೆ ಮಾಡಲಾಗಿದೆ.

ನಿನ್ನೆ ಶುಕ್ರವಾರ ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢಪಟ್ಟಿತ್ತು. ವರದಹಳ್ಳಿ ಎಂಬ ಗ್ರಾಮದಲ್ಲಿ 45 ಕೋಳಿಗಳು ಮೃತಪಟ್ಟಿದ್ದವು. ಈ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಲರ್ಟ್ ಆಗಿದೆ. ಇಲಾಖೆಯ ಸಿಬ್ಬಂದಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಹಕ್ಕಿಜ್ವರ ಮನುಷ್ಯರಿಗೆ ಹರಡಿದೆಯೇ? ಎಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ಹೀಗಾಗಿಯೇ ರಾಜ್ಯಾದ್ಯಂತ ಕೋಳಿ ಮೊಟ್ಟೆ ದರ ಕುಸಿತ ಕಂಡಿದೆ. ಜೊತೆಗೆ ಕೋಳಿ ಮಾಂಸ ತಿನ್ನಲು ಜನರು ಹಿಂಜರಿಯುತ್ತಿದ್ದಾರೆ.


Share It

You cannot copy content of this page