ಬೆಳಗಾವಿ: ಅಂಬೇಡ್ಕರ್ ಭಾವಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು
ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಗಾಂಧಿ ನಗರದಲ್ಲಿ ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಬಣ್ಣ ಬಳಿದಿರುವ ಘಟನೆ ಕಿತ್ತೂರು ಬಳಿ ಎಂ.ಕೆ.ಹುಬ್ಬಳ್ಳಿ ಯಲ್ಲಿ ನಡೆದಿದೆ.
ಈ ಘಟನಾ ಸ್ಥಳಕ್ಕೆ ಕಿತ್ತೂರು ಪೊಲೀಸ್ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲಿಸಿದ್ದು, ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ. ಸಮೀಪದ ಸಿಸಿ ಕ್ಯಾಮೆರಾ ಪರಿಶೀಲಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯದಿಂದ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಿರಲೆಂಬ ಉದ್ದೇಶದಿಂದ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿದ್ದು, ಪ್ರಕರಣ ದಾಖಲಿಸಿ, ತಪ್ಪಿತಸ್ಥರ ಮೇಲೆ ಸೂಕ್ತಕ್ರಮಕ್ಕೆ ಆಗ್ರಹಿಸಿದ್ದಾರೆ.


