ಅಪರಾಧ ಸುದ್ದಿ

ಭೀಕರ ರಸ್ತೆ ಅಪಘಾತಕ್ಕೆ ಮಗು ಸೇರಿ ಸ್ಥಳದಲ್ಲೇ ಮೂವರ ಸಾವು

Share It

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.

ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಆಯಿಷಾ ಸೈಯ್ಯದ (18) ಹಾಗೂ ಇನ್ನೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ.ಪಾಟೀಲ ಅವರ ಪುತ್ರ ಸುರೇಶಗೌಡ ಪಾಟೀಲ ಗಾಯಗೊಂಡು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಸೈಯ್ಯದ್ ಕುಟುಂಬ ಗೋಕಾಕದಲ್ಲಿ ಸಂಬಂಧಿಕರ ಮದುವೆ ಮುಗಿಸಿಕೊಂಡು ಅಲ್ಟೋ ಕಾರಿನಲ್ಲಿ ಬರುವಾಗ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಮಾಜಿ ಶಾಸಕ ಆರ್.ವಿ.ಪಾಟೀಲ ಪುತ್ರ ಕಿಯಾ ಕಾರನ್ನು ಓವರ್ ಟೆಕ್ ಮಾಡಲು ಹೋಗಿ ಅಲ್ಟೋ ಕಾರಿಗೆ ಎದುರಿನಿಂದ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣೆಯ ಸಿಪಿಐ ಪಂಚಾಕ್ಷರಿ ಸಾಲಿಮಠ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page