ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿದ್ದ ನಡ ರಾಕೇಶ್ ಪೂಜಾರಿ ಮೂಲತಃ ದಕ್ಷಿಣ ಕನ್ನಡದವರು. ಅವರು ಕಷ್ಟದಿಂದ ಜೀವನಕಟ್ಟಿಕೊಂಡು ಹೋರಾಟದ ಬದುಕು ನಡೆಸುತ್ತಿದ್ದರು. ಕಾಮಿಡಿ ಕಿಲಾಡಿಗಳು ವೇದಿಕೆಯ ಮೂಲಕ ಜನಪ್ರಿಯ ಹಾಸ್ಯನಟರಾಗಿ ಗುರುತಿಸಿಕೊಳ್ಳುವ ಭರವಸೆ ಮೂಡಿಸಿದ್ದರು.
ಇತ್ತೀಚಿಗೆ ಭರ್ಜರಿ ಬ್ಯಾಚುಲರ್ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರು. ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.