ಬೆಂಗಳೂರು: ಬಿಟಿಎಂ ವಿಧಾನಸಭೆ ಕ್ಷೇತ್ರದ ಈಜಿಪುರ ವಾರ್ಡ್ ನಲ್ಲಿ 12.5 ಲಕ್ಷ ರು.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೆಬ್ಬಾಗಿಲು ನಿರ್ಮಾಣ ಕಾಮಗಾರಿಯನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.

ಕಾಮಗಾರಿಗೆ ಕರ್ನಾಟಕ ರಾಜ್ಯ ಮುಜರಾಯಿ ದೇವಸ್ಥಾನ ಅಭಿವೃದ್ಧಿ ನಿಧಿ ಅಡಿಯಲ್ಲಿ 12.5 ಲಕ್ಷ ರು.ಗಳ ಅನುದಾನವನ್ನು ಮಂಜೂರು ಮಾಡಲಾಗಿದೆ. ಕಾಮಗಾರಿ ಆರಂಭವಾಗಲಿದ್ದು, ರಾಮಲಿಂಗಾ ರೆಡ್ಡಿ ಅವರು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು , ಈಜೀಪುರ , ನಡುಗಡ್ಡೆ ಹಾಗೂ ಶ್ರೀನಿವಾಗಿಲು ಗ್ರಾಮಸ್ಥರು , ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.