ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬ: ಹೊಳಲ್ಕೆರೆ ಶಾಸಕರ ಮನೆ ಮುಂದೆ ತಮಟೆ ಚಳುವಳಿ

Share It

ಚಿತ್ರದುರ್ಗ: ಇದೇ ಸೆಪ್ಟೆಂಬರ್ 24 ರಂದು ಹೊಳಲ್ಕೆರೆ ಶಾಸಕ ಎಂ‌.ಚಂದ್ರಪ್ಪ ಅವರ ನಿವಾಸದ ಮುಂದೆ ತಮಟೆ ಚಳುವಳಿ ನಡೆಸಲಾಗುತ್ತದೆ ಎಂದು ನೀರಾವರಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ ಲಿಂಗಾರೆಡ್ಡಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಲಿಂಗಾರೆಡ್ಡಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿ ಅರಿತುಕೊಂಡು ಬರಪೀಡಿತ ಮಧ್ಯಕರ್ನಾಟಕದ 4 ಜಿಲ್ಲೆಗಳಾದ ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ ಜಿಲ್ಲೆಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲಿ ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ರೈತಸಂಘದ ಜಿಲ್ಲಾಧ್ಯಕ್ಷ ಧನಂಜಯ ಅವರು, ಬಿಜೆಪಿ ನೇತೃತ್ವದ ಕೇಂದ್ರಸರ್ಕಾರ ಹಾಗೂ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರ ಬರೀ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸದೆ ಬರೋಬ್ಬರಿ 17 ವರ್ಷಗಳ ಕಾಲ ಸಮಯ ವ್ಯರ್ಥ ಮಾಡಿ ರೈತರ ಬದುಕನ್ನು ಹಾಳು ಮಾಡುತ್ತಿವೆ ಎಂದು ಕಿಡಿಕಾರಿದರು.

ಇನ್ನಾದರೂ ಈ ಬಗ್ಗೆ ಕೇಂದ್ರ ಜಲಶಕ್ತಿ ಸಹಾಯಕ ಸಚಿವ ವಿ.ಸೋಮಣ್ಣ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ರಾಜ್ಯ ಸರ್ಕಾರ ಒಮ್ಮತದಿಂದ ಮಧ್ಯ ಕರ್ನಾಟಕದ ಬರಪೀಡಿತ ರೈತರ ಬದುಕು ಹಾಳು ಮಾಡದೆ ಕಾಮಗಾರಿ ಪೂರ್ಣಗೊಳಿಸಲಿ ಎಂದು ಒತ್ತಾಯಿಸಿದರು.


Share It

You cannot copy content of this page