ಅಪರಾಧ ಸುದ್ದಿ

ರಾಮನಗರ:ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು!

Share It

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯ ನೋಡಲೆಂದು ಬಂದಿದ್ದು 7 ಯುವತಿಯರಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಮಧುಮಿತ(20), ರಾಘವಿ(18), ರಮ್ಯಾ(22) ಮೃತರಾಗಿದ್ದು,

ಜಲಾಶಯ ವೀಕ್ಷಣೆಗೆಂದು ಏಳು ಯುವತಿಯರು ತೆರಳಿದ್ದಾರೆ. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಎಲ್ಲರೂ ನೀರಿಗೆ ಬಿದ್ದಿದ್ದು, ಇದರಲ್ಲಿ ಮೂವರು ಯುವತಿಯರು ಮೃತಪಟ್ಟಿದ್ದಾರೆ.

ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.
ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದ ಯುವತಿಯರು, ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಏಳು ಯುವತಿರು ನೀರಿಗೆ ಬಿದ್ದಾಗ ಸ್ಥಳದಲ್ಲಿದ್ದ ಯುವಕನೋರ್ವ ಕೆಲವರನ್ನು ರಕ್ಷಣೆ ಮಾಡಿದ್ದಾನೆ. ಆದ್ರೆ, ಏಳು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


Share It

You cannot copy content of this page