ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಚಾಕು ಇರಿತ

Share It

ಬೆಳಗಾವಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ.

ಬೆಳಗಾವಿ ತಾಲೂಕು ಪಂತಬಾಳೇಕುಂದ್ರಿ ಗ್ರಾಮದ 19 ವರ್ಷದ ವಿದ್ಯಾರ್ಥಿಗೆ ಚಾಕು ಇರಿಲಾಗಿದೆ. ಬಸ್ಸಿನ ಕಿಟಕಿಯ ಬಳಿಯ ಸೀಟಿಗಾಗಿ ನಡೆದ ಈ ಗಲಾಟೆಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಸದ್ಯ ಈತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿಸಿಪಿ ರೋಹನ್ ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವವರೆಗೆ ಜಗಳವಾಡಿದ ಅಪರಿಚಿತ ಗುಂಪು ಚಾಕು ಇರಿದಿದೆ. ಅಪರಿಚಿತರನ್ನು ಪತ್ತೆ ಮಾಡಲು ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ


Share It

You May Have Missed

You cannot copy content of this page