ಸುದ್ದಿ

ಗೊಬ್ಬರದ ಅಂಗಡಿ, ಸೊಸೈಟಿ ದಾಸ್ತಾನು ಮಳಿಗೆಗಳಿಗೆ ತಹಸೀಲ್ದಾರ್ ದಿಢೀರ್ ಭೇಟಿ: ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರಿಗೆ ತರಾಟೆ

Share It

ಅಣ್ಣಿಗೇರಿ : ಬೇಡಿಕೆಗಿಂತ ಹೆಚ್ಚು ರಾಸಾಯನಿಕ ಗೊಬ್ಬರ ವಿತರಿಸಿದರೂ ಅಣ್ಣಿಗೇರಿ ತಾಲೂಕಿನಲ್ಲಿ ಅನಗತ್ಯ ಗೊಂದಲ, ರೈತರಿಗೆ ತೊಂದರೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ದಾಸಪ್ಪನವರ ದಿಢೀರ್ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಶಾಕ್ ನೀಡಿದರು.

ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಿತರಕರು ಸರಕಾರದ ನಿಯಮ, ಷರತ್ತು ಪಾಲಿಸದೆ ಇರುವುದು ಮತ್ತು ಸಂಬಂಧಿಸಿದ ಅಧಿಕಾರಿಗಳು ಕ್ರಮಬದ್ಧವಾಗಿ ಮೇಲುಸ್ತುವಾರಿ ಹಾಗೂ ನಿಗಾವಹಿಸದಿರುವುದು ಕಂಡು ಬಂದಿದೆ. ಅಧಿಕಾರಿಗಳಿಂದ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾಸಪ್ಪನವರ ಹೇಳಿದರು.

ಸಾರ್ವಜನಿಕ ದೂರು ಹಿನ್ನೆಲೆಯಲ್ಲಿ ಬೀಜ, ರಸಗೊಬ್ಬರದ ಸಮಸ್ಯೆಗಳನ್ನು ತಿಳಿದು, ಪರಿಹರಿಸುವ ಉದ್ದೇಶದಿಂದ ಅಣ್ಣಿಗೇರಿ ಪಟ್ಟಣದ ಬೀಜ, ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಹಾಗೂ ಸೂಸೈಟಿಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲಿಸಲಾಯಿತು.. ಕೊಂಡುಕೊಳ್ಳಲು ಬಂದಿದ್ದ ರೈತರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು.

ರೈತರನ್ನು ಉದ್ದೇಶಿಸಿ ದಾಸಪ್ಪನವರ ಮಾತನಾಡಿ, ಮಣ್ಣಿಗೆ ನಾವೆಲ್ಲರೂ ಗೌರವ ಕೊಡಬೇಕು. ಯಾವುದೋ ಗೊಬ್ಬರ ಹಾಕಿ ಅದರ ಫಲವತ್ತತೆ ಹಾಳು ಮಾಡಬಾರದು. ಯಾರಾದರೂ ದಬ್ಬಾಳಿಕೆ ಮಾಡಿ ಇದೇ ಗೊಬ್ಬರ ತೆಗೆದುಕೊಳ್ಳಿ ಎಂದು ಹೇಳಿ ನಿಮ್ಮ ದಾರಿ ತಪ್ಪಸಿ ಗೊಬ್ಬರ ಕೊಟ್ಟರೆ ಅದನ್ನು ಖರೀದಿ ಮಾಡಬಾರದು.
ಅತಂಹವರ ಮೇಲೆ ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಒಂದು ತಂಡ ರಚನೆ ಮಾಡಲಾಗಿದ್ದು, ಆ ತಂಡವು ಎಲ್ಲವನ್ನು ಪರಿಶೀಲಿಸುತ್ತದೆ ಎಂದು ಹೇಳಿದರು.

ಪ್ರತಿ ತಾಲೂಕಿಗೆ ಟಾಸ್ಕ್ ಫೋರ್ಸ್ ರಚನೆ: ಕೆಲವು ರಸಗೊಬ್ಬರ ಮಾರಾಟಗಾರರು ಮತ್ತು ಇತರರು ರೈತರಿಗೆ ರಸಗೊಬ್ಬರ ವಿತರಿಸುವಲ್ಲಿ ಕಾನೂನು, ಸರಕಾರದ ಆದೇಶ ಮೀರಿ ವರ್ತಿಸುತ್ತಿರುವುದು ಮತ್ತು ರೈತರನ್ನು ವಂಚಿಸುತ್ತಿರುವುದು ಕಂಡು ಬರುತ್ತಿದೆ.

ಆದ್ದರಿಂದ ನಿಯಮಾನುಸಾರ ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕಳನಾಶಕ ವಿತರಿಸುವುದನ್ನು ಪರಿಶೀಲಿಸಲು, ನಿರಂತರ ನಿಗಾವಹಿಸಲು ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೆವೆ.


ಈ ಸಂದರ್ಭದಲ್ಲಿ ಅಣ್ಣಿಗೇರಿ ತಹಶಿಲ್ದಾರರ ಇಲಾಖೆಯ ಅಧಿಕಾರಗಳು.ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಇತರರು ಇದ್ದರು.


Share It

You cannot copy content of this page