ನಾಗಮಂಗಲ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಯ ನಂತರ ಕೆಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಜೆಪಿ ನಾಯಕರು, ಇದು ನಾಗಮಂಗಲದ ಫೋಟೇಜ್ ಎಂದು ಬಿಂಬಿಸಿದ್ದರು.
ಸುಳ್ಳು ಫೊಟೋ, ವಿಡಿಯೋ ಬಳಸಿ ಶಾಂತಿ ಕದಡುವ ಪ್ರಯತ್ನ ನಡೆಸಿದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೂವರು ನಾಯಕರಿಗೆ ನೊಟೀಸ್ ನೀಡಲು ಪೊಲೀಸರು ಸಜ್ಜಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ, ಎಫ್ಐಆರ್ ಗೆ ಉತ್ತರ ನೀಡುತ್ತೇನೆ. ಕಾನೂನಾತ್ಮಕವಾಗಿ ಎಲ್ಲವನ್ನೂ ಎದುರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.